ಸುಪ್ರೀಂಕೋರ್ಟ್‍ನ ನೂತನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ರಂಜನ್ ಗಗೋಯ್ ನೇಮಕ
ಶುಕ್ರವಾರ, 14 ಸೆಪ್ಟಂಬರ್ 2018 (12:00 IST)
ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸುಪ್ರೀಂಕೋರ್ಟ್‍ನ ನೂತನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನು ನೇಮಕ ಮಾಡಿದ್ದಾರೆ.
ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗಗೋಯ್ ಅವರನ್ನು ನೇಮಕ ಮಾಡಿದ್ದಾರೆ.
ಅಕ್ಟೋಬರ್ 2ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಅವಧಿ ಪೂರ್ಣಗೊಳ್ಳಲ್ಲಿದ್ದು, ಅ.3ರಂದು ರಂಜನ್ ಗಗೋಯ್ ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆ ಮೂಲಕ ಈಶಾನ್ಯ ಭಾರತದಿಂದ ಸುಪ್ರೀಂಕೋರ್ಟ್‍ಗೆ ಮುಖ್ಯ ನ್ಯಾಯಮೂರ್ತಿ ಆಯ್ಕೆಯಾದ ಮೊದಲ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೂ ರಂಜನ್ ಗಗೋಯ ಪಾತ್ರರಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.