ಇಂದು ಜ್ಞಾನವಾಪಿ ಪ್ರಕರಣ ಕೋರ್ಟ್ ತೀರ್ಪು

ಸೋಮವಾರ, 12 ಸೆಪ್ಟಂಬರ್ 2022 (12:17 IST)
ವಾರಣಾಸಿ : ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಇದೆ ಎನ್ನಲಾದ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ,

ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯವಾಗಿದಿಯೇ, ಇಲ್ಲವೇ ಎನ್ನುವ ಬಗ್ಗೆ ವಾರಣಾಸಿ  ಜಿಲ್ಲಾ ನ್ಯಾಯಲಯ ಇಂದು ತೀರ್ಪು ನೀಡಲಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಕೋಮು ಸೂಕ್ಷ್ಮ ಪ್ರಕರಣದ ಆದೇಶವನ್ನು ಸೆಪ್ಟೆಂಬರ್ 12 ರವರೆಗೆ ಕಾಯ್ದಿರಿಸಿದ್ದರು. ಇದಕ್ಕೂ ಮುನ್ನ ಜ್ಞಾನವ್ಯಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು.

ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು ಅಧಿಕಾರಿಗಳು ಕೋರ್ಟ್ಗೆ ವರದಿ ನೀಡಿದ್ದರು. ಈ ವರದಿಯ ಬೆನ್ನಲೆ ದೊಡ್ಡ ಪ್ರಮಾಣ ಸಂಚಲನ ಸೃಷ್ಟಿಯಾಗಿತ್ತು. ಮಸೀದಿಯ ಜಾಗದಲ್ಲಿ ಮಂದಿರಾ ಇದೆ ಎಂದು ಕೆಲವರು ವಾದಿಸಿದ್ದರು. 

ಈ ನಡುವೆ ಐವರು ಮಹಿಳೆಯರು ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರ್ಟ್ ಮೇಟ್ಟಿಲೇರಿದ್ದರು.

ಇಂದು ಈ ಬಗ್ಗೆ ಕೋರ್ಟ್ ಮೊದಲ ತೀರ್ಪು ನೀಡುತ್ತಿದೆ. ಈ ಅರ್ಜಿ ವಿಚಾರಣೆಗೆ ಯೋಗ್ಯವಾಗಿದ್ದಲ್ಲಿ ಮಾತ್ರ ಕೋರ್ಟ್ ಪೂಜೆಗೆ ಅವಕಾಶ ನೀಡಬೇಕಾ ಎನ್ನುವ ಅರ್ಜಿಯ ವಿಚಾರಣೆ ನಡೆಸಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ