ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪಾತ್ರವೇನು ಇಂದು ನಿರ್ಧಾರ

Krishnaveni K

ಶನಿವಾರ, 8 ಜೂನ್ 2024 (14:04 IST)
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸುಧಾರಿತ ಪ್ರದರ್ಶನ ನೀಡಲು ರಾಹುಲ್ ಗಾಂಧಿ ಭಾರತ್ ಝೋಡೋ ಯಾತ್ರೆ ಪ್ರಮುಖ ಕಾರಣ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ ಬೆನ್ನಲ್ಲೇ ಈಗ ರಾಹುಲ್ ಗಾಂಧಿ ವಿಪಕ್ಷ ನಾಯಕನ ಪಟ್ಟ ಕಟ್ಟಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರೆಡಿಯಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಸಿಕ್ಕ  ಯಶಸ್ಸಿನ ಬಳಿಕ ಉಬ್ಬಿ ಹೋಗಿರುವ ಕಾಂಗ್ರೆಸ್ ನಾಯಕರು ಈಗ ರಾಹುಲ್ ಗಾಂಧಿಯನ್ನೇ ಲೋಕಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲು ಮುಂದಾಗಿದ್ದಾರೆ. ಬಹುದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ನಾಯಕರೇ ಈ ಬಾರಿ ಅಧಿಕೃತ ವಿಪಕ್ಷ ಸ್ಥಾನ ಗಳಿಸಲಿದೆ.

ಇತ್ತೀಚೆಗೆ ನಡೆದ ಲೋಕಸಭೆ  ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೊಡುಗೆ ಮುಖ್ಯವಾದುದು. ಹೀಗಾಗಿ ಅವರನ್ನೇ ವಿಪಕ್ಷ ನಾಯಕನಾಗಿ ಮಾಡುವ ಸಾಧ್ಯತೆ ದಟ್ಟವಾಗಿದೆ. ಇನ್ನೊಂದೆಡೆ ಸೋನಿಯಾ ಗಾಂಧಿಯವರನ್ನು ಮತ್ತೊಮ್ಮೆ ಕಾಂಗ್ರೆಸ್ ನ ಸಂಸದೀಯ ನಾಯಕಿಯಾಗಿ ಮರು ಆಯ್ಕೆಯಾಗಲಿದ್ದಾರೆ.

ಇಂದು ಸಂಜೆ ರಾಜ್ಯಸಭೆ ಮತ್ತು ಲೋಕಸಭೆ ಸಂಸದರನ್ನೊಳಗೊಂಡ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗೆ ಮರಳಿ ಪಟ್ಟ ಕಟ್ಟುವ ನಿರೀಕ್ಷೆಯಿದೆ. ರಾಹುಲ್ ಗಾಂಧಿ ಈ ಬಾರಿ ವಯನಾಡು ಮತ್ತು ರಾಯ್ ಬರೇಲಿಯಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ