ನಕಲಿ ಖಾತೆ ತೆರೆದು 150 ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ವಂಚಕ ಅರೆಸ್ಟ್
ವ್ಯಾಟ್ಸಪ್ ಮತ್ತು ಇನ್ ಸ್ಟಾಗ್ರಾಂ ಮೂಲಕ ಮಹಿಳೆಯರಿಗೆ ಕರೆ, ಸಂದೇಶ ಕಳುಹಿಸಿ ಆರೋಪಿ ಕಿರುಕುಳ ನೀಡುತ್ತಿದ್ದ. ಮಹಿಳೆಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಬೆದರಿಕೆ ಹಾಕುತ್ತಿದ್ದ.
ಈತನ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ಸೈಬರ್ ಅಧಿಕಾರಿಗಳಿಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಆತ ಇನ್ನಷ್ಟು ಮಹಿಳೆಯರಿಗೆ ಇದೇ ರೀತಿ ಮೋಸ ಮಾಡುತ್ತಿರುವುದು ಬೆಳಕಿಗೆ ಬಂತು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.