ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

Sampriya

ಭಾನುವಾರ, 3 ಆಗಸ್ಟ್ 2025 (16:56 IST)
ತಿರುವನಂತಪುರಂ: ಮನ್ನಾರ್ ಕೊಲ್ಲಿ ಮತ್ತು ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತದ ಪ್ರಭಾವದಿಂದ ಈ ವಾರ ಕೇರಳದಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 

ಆಗಸ್ಟ್ 7 ರವರೆಗೆ ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಹಳದಿ ಅಲರ್ಟ್‌ಗಳನ್ನು ಘೋಷಿಸಲಾಗಿದೆ. ಹವಾಮಾನ ಕಚೇರಿ ಪ್ರಕಾರ, ರಾಜ್ಯದ ದಕ್ಷಿಣ ಜಿಲ್ಲೆಗಳು ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿರುವುದರಿಂದ ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ.

ಭಾನುವಾರ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದ್ದು, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡುಗಳಿಗೆ ಹಳದಿ ಅಲರ್ಟ್‌ ನೀಡಲಾಗಿದೆ. ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಆಗಸ್ಟ್ 5 ರವರೆಗೆ ಆರೆಂಜ್ ಅಲರ್ಟ್ ಮುಂದುವರಿಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ