ಕೇರಳದಲ್ಲೂ ಚಂಡಮಾರುತ ಎಫೆಕ್ಟ್‌: ಕಾಲ್ನಡಿಗೆಯಲ್ಲಿ ಸಾಗುವ ಶಬರಿಮಲೆ ಯಾತ್ರಿಕರಿಗೆ ನಿಷೇಧ

Sampriya

ಸೋಮವಾರ, 2 ಡಿಸೆಂಬರ್ 2024 (15:09 IST)
Photo Courtesy X
ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪರಿಣಾಮದಿಂದ ಕೇರಳದಲ್ಲೂ ಭಾರೀ ಮಳೆಯಾಗುತ್ತಿದೆ. ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ನಿಷೇಧ ಹೇರಲಾಗಿದೆ.

ಭಾರೀ ಮಳೆಯ ಹಿನ್ನೆಲೆ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರವಾಹ ಉಂಟಾಗುವ ಪ್ರದೇಶದಲ್ಲಿ ನೆಲೆಸಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ.

ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.  

ಕಾಲ್ನಡಿಗೆ ಯಾತ್ರಿಕರು ನೀಲಕ್ಕಲ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅರಣ್ಯ ಮಾರ್ಗದ ಮೂಲಕ ಆಗಮಿಸಿದ್ದ ಭಕ್ತರನ್ನು ವಿಶೇಷ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಪಂಪಾಗೆ ಕರೆದೊಯ್ಯಲಾಗಿದೆ.  

ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರ ಇದೆ. ಭಾನುವಾರದಿಂದ ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದೆ. ಅಲ್ಲದೇ ಭೂಕುಸಿತ ಉಂಟಾಗುವ ಸಾಧ್ಯತೆಯಿಂದ ಅರಣ್ಯ ಮಾರ್ಗದಲ್ಲಿ ಕಾಲ್ನಡಿಗೆ ನಿಷೇಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ