ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ, ಕೇಂದ್ರ ಸರಕಾರದ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ಬಿಡುಗಡೆಗೊಳಿಸಿ ಜುಲೈ 1, 2017 ರಿಂದ ಜಾರಿಗೆ ಬರುವಂತೆ ಅನುಮತಿ ನೀಡಿದೆ ಎಂದು ವಿತ್ತಸಚಿವಾಲಯದ ಮೂಲಗಳು ತಿಳಿಸಿವೆ.
ಕೇಂದ್ರ ಸರಕಾರಿ ನೌಕರರ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಳದಿಂದಾಗಿ ಕೇಂದ್ರ ಸರಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 3,068.26 ಕೋಟಿ ರೂಪಾಯಿಗಳ ಹೊರೆಯಾಗಲಿದೆ. ಪ್ರಸಕ್ತ ಆರ್ಥಿಕ ವರ್ಷವಾದ 2017-18ರಲ್ಲಿ 2,045.50 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ.