ಡಾರ್ಜಿಲಿಂಗ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಸರ್ಕಾರಿ ಕಚೇರಿಗಳಿಗೆ ಬೆಂಕಿ
ಶುಕ್ರವಾರ, 16 ಜೂನ್ 2017 (14:06 IST)
ಡಾರ್ಜಿಲಿಂಗ್: ಪ್ರತ್ಯೇಕ ಗೋರ್ಖಾ ರಾಜ್ಯಕ್ಕಾಗಿ ಆಗ್ರಹಿಸಿ ಡಾರ್ಜಿಲಿಂಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಆರೋಗ್ಯ ಕೇಂದ್ರ ಹಾಗೂ ಜಲ ಯೋಜನೆಗೆ ಸಂಬಂಧಿಸಿದಂತಹ ಸರ್ಕಾರಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಲುಧಾಮದಲ್ಲಿರುವ ಆರೋಗ್ಯ ಕೇಂದ್ರ ಹಾಗೂ ರಿಂಬಿಕ್ ನಲ್ಲಿರುವ ಜಲ ಯೋಜನೆಯ ಸರ್ಕಾರಿ ಕಚೇರಿಗಳಿಗೆ ನುಗ್ಗಿರುವ ದುಷ್ಕರ್ಮಿಗಳ ಗುಂಪು ಕಛೇರಿಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಬಳಿಕ ಡಾರ್ಜಿಲಿಂಗ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
ನಿನ್ನೆಯಷ್ಟೇ ಜಿಜೆಎಂ ಮುಖ್ಯಸ್ಥ ಬಿಮಲ್ ಗುರುಂಗ್ ಕಚೇರಿಗೆ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು.