ಮಾವನಿಂದ ಅತ್ಯಾಚಾರಕ್ಕೆ ಒಳಗಾದ ನವವಿವಾಹಿತೆ ಆತ್ಮಹತ್ಯೆಗೆ ಶರಣು
ಸೋಮವಾರ, 17 ಡಿಸೆಂಬರ್ 2018 (07:10 IST)
ಭೋಪಾಲ್ : ಮದುವೆಯಾಗಿ ಗಂಡನ ಜೊತೆ ಸುಖಸಂಸಾರ ಶುರುಮಾಡಬೇಕಾಗಿದ್ದ 20 ವರ್ಷದ ಮಹಿಳೆ ಮಾವನಿಂದ ಅತ್ಯಾಚಾರಕ್ಕೆ ಒಳಗಾಗಿ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯಪ್ರದೇಶದ ಬಜಾರಿಯಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನರಸಿಂಗಾಪುರದ ಮಹಿಳೆ ಬಜಾರಿಯಾ ಮೂಲದ ಯುವಕನೊಬ್ಬನನ್ನು ಜೂನ್ ತಿಂಗಳಲ್ಲಿ ವಿವಾಹವಾಗಿದ್ದಳು. ಆದರೆ ಮದುವೆಯಾಗಿ ಮನೆಗೆ ಬಂದ ಸೊಸೆಯ ಜೊತೆ ಮಾವ ಅಸಭ್ಯವಾಗಿ ವರ್ತಿಸಲು ಶುರುಮಾಡಿದ್ದಾನೆ. ಒಮ್ಮೆ ಯಾರು ಮನೆಯಲ್ಲಿ ಇಲ್ಲದಿದ್ದಾಗ ಮಾವ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಈ ವಿಚಾರವನ್ನು ಅತ್ತೆ ಹಾಗೂ ಗಂಡನ ಬಳಿ ಹೇಳಿದರೆ ಅವರು ಸಂತೈಸುವ ಬದಲು ಆಕೆಯ ಮೇಲೆ ಹಲ್ಲೆ ಮಾಡಿ ಈ ವಿಷಯನ್ನು ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿದ್ದಾರೆ. ಈ ಘಟನೆಯಿಂದ ಮನನೊಂದ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಕುರಿತು ಮೃತ ಮಹಿಳೆಯ ಪೋಷಕರು ಬಜಾರಿಯಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಅತ್ಯಾಚಾರ ಎಸಗಿದ್ದ ಮಾವನ ಜೊತೆಗೆ ಹಲ್ಲೆ ಮಾಡಿದ ಅತ್ತೆ ಹಾಗೂ ಪತಿಯನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.