ತಂದೆಯ ಎದುರೇ ಮಗಳ ಮೇಲೆ ಅತ್ಯಾಚಾರ
8 ನೇ ತರಗತಿಯ ಬಾಲಕಿ ಮನೆಯಲ್ಲಿ ಮಲಗಿದ್ದಾಗ ಮನೆಗೆ ನುಗ್ಗಿದ ಆರೋಪಿ ಮನೆಯಿಂದ ಹೊರಗೆಳೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಮಗಳನ್ನು ಹಿಂಬಾಲಿಸಿದ ತಂದೆಯ ಮೇಲೂ ಗನ್ ನಳಿಕೆಯಿಂದ ಹೊಡೆದು ಗಾಯಗೊಳಿಸಿದ್ದಾನೆ.
ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ತಂದೆ ದೂರು ದಾಖಲಿಸಿದರೂ ಸ್ವೀಕರಿಸಿರಲಿಲ್ಲ. ಬಳಿಕ ಎಸ್ ಪಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.