ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್‌ ದಂಪತಿ

Sampriya

ಭಾನುವಾರ, 9 ಫೆಬ್ರವರಿ 2025 (17:54 IST)
Photo Courtesy X
ಪ್ರಯಾಗ್‌ರಾಜ್‌: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌  ದಂಪತಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಉತ್ತರ ಪ್ರದೇಶ ಕೈಗಾರಿಕಾ ಸಚಿವ ನಂದಗೋಪಾಲ ಗುಪ್ತಾ ಅವರು ಡಿಕೆಶಿ ದಂಪತಿಗೆ ಭವ್ಯ ಸ್ವಾಗತ ಕೋರಿದ್ದಾರೆ.‌

ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಬಳಿಕ ನೊಣವಿಕೆರೆ ಅಜ್ಜಯ್ಯ ಆಶೀರ್ವಾದ ಪಡೆದರು. ಇದೇ ವೇಳೆ ಕುಂಭಮೇಳದಲ್ಲಿದ್ದ ಸಾಧು-ಸಂತರ ಆಶೀರ್ವಾದವನ್ನು ಡಿಕೆಶಿ ಪಡೆದುಕೊಂಡರು. ಈ ವೇಳೆ ಅಧ್ಯಾತ್ಮದ ಕುರಿತು ಸಂತರೊಟ್ಟಿಗೆ ಕೆಲ ಹೊತ್ತು ಚರ್ಚೆ ನಡೆಸಿದರು.

ಇದಕ್ಕೂ ಮುನ್ನ ಡಿಕೆಶಿ ಪುತ್ರಿ ಐಶ್ವರ್ಯಾ ಅವರು ಕುಂಭಮೇಳದಲ್ಲಿ ಪಾಲ್ಗೊಂಡಿದ್ದರು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ, ಸಾಧು-ಸಂತರ ಆಶೀರ್ವಾದ ಪಡೆದಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ