ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ವಿವರಣೆ ಕೋರಿದ ದೆಹಲಿ ಮಹಿಳಾ ಆಯೋಗ

ಶನಿವಾರ, 1 ಆಗಸ್ಟ್ 2015 (17:50 IST)
ಕಳೆದ 2013ರಿಂದ ಇಲ್ಲಿಯವರೆಗೆ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ಬಗ್ಗೆ ವಿವರಣೆ ನೀಡಿ ಎಂದು ದೆಹಲಿ ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ವಿವರಣೆ ಕೇಳಿದೆ.
 
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್, ಪ್ರತಿನಿತ್ಯ ಐದು ರೇಪ್ ಪ್ರಕರಣಗಳು ಮತ್ತು 13 ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
  
ದೆಹಲಿ ಮಹಿಳಾ ಆಯೋಗ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತಂತೆ ಅಧ್ಯಯನ ನಡೆಸುತ್ತಿರುವುದರಿಂದ ಡೇಟಾ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
 
ಕಳೆದ 2013ರಿಂದ ಇಂದಿನವರೆಗೆ ಆನಂದ್ ಪರಭತ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಹಿಳಾ ದೌರ್ಜನ್ಯಗಳ ಪ್ರಕರಣಗಳು ಎಷ್ಟು? ಪ್ರತಿಯೊಂದು ಪ್ರಕರಣಕ್ಕೆ ಎಫ್‌ಐಆರ್ ದಾಖಲಾಗಿದೆಯೇ? ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಪೊಲೀಸ್ ರಕ್ಷಣೆ ನೀಡಿದೆಯೇ? ಎಲ್ಲಾ ಪ್ರಕರಣಗಳಲ್ಲಿ ಚಾರ್ಜ್‌ಶೀಟ್ ದಾಖಲಿಸಲಾಗಿದೆಯೇ ಎನ್ನುವ ಬಗ್ಗೆ ಪೊಲೀಸ್ ಆಯುಕ್ತರು ವರದಿ ಸಲ್ಲಿಸುವಂತೆ ದೆಹಲಿ ಮಹಿಳಾ ಆಯೋಗ ಕೋರಿದೆ.
 

ವೆಬ್ದುನಿಯಾವನ್ನು ಓದಿ