ಗೋಹತ್ಯೆಗೈದವರಿಗೆ ಮರಣದಂಡನೆ ಶಿಕ್ಷೆಯಾಗಲಿ: ಸುಬ್ರಹ್ಮಣ್ಯಂ ಸ್ವಾಮಿ

ಭಾನುವಾರ, 21 ಜನವರಿ 2018 (18:06 IST)
ಗೋಹತ್ಯೆಗೈದವರಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಒತ್ತಾಯಿಸಿದ್ದಾರೆ.
ನಗರದ ರಾಮಚಂದ್ರಪುರ ಮಠದಲ್ಲಿ ಮಾತನಾಡಿದ ಅವರು, ಗೋಹತ್ಯೆ ಮಾಡಿದವರಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆಯಾಗಬೇಕು. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಲ್ಲಿ ಗೋಹತ್ಯೆ ನಿಷೇಧಿಸಲಾಗುವುದು ಎಂದು ತಿಳಿಸಿದ್ದಾರೆ.
 
ಹಿಂದೂಗಳಾಗಲಿ ಅಥವಾ ಮುಸ್ಲಿಮರಾಗಲಿ ಗೋಮಾಂಸ ಸೇವಿಸಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದೆ. ಗೋಮಾಂಸ ಸೇವಿಸುವವರು ಸಂವಿಧಾನ ವಿರೋಧಿಗಳು. ಅಂತಹವರಿಗೆ ಶಿಕ್ಷೆಯಾಗಲೇಬೇಕು ಎಂದು ಕಿಡಿಕಾರಿದ್ದಾರೆ.
 
ಕಾಂಗ್ರೆಸ್ ಸರಕಾರ ಗೋಹತ್ಯೆ ಮಾಡುವವರ ಪರವಾಗಿದೆ. ಇಂತಹ ಸರಕಾರಕ್ಕೆ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ