ಸಂಜಯ್ ರಾವತ್, ಸಹೋದರನಿಗೆ ಕೊಲೆ ಬೆದರಿಕೆ

ಭಾನುವಾರ, 11 ಜೂನ್ 2023 (07:22 IST)
ಮುಂಬೈ : ಶಿವಸೇನಾ ಮುಖಂಡ ಸಂಜಯ್ ರಾವತ್ ಮತ್ತು ಅವರ ಸಹೋದರ ಸುನೀಲ್ ರಾವತ್ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
 
ಒಬ್ಬ ಆರೋಪಿ ಆಟೋ ಚಾಲಕ ಹಾಗೂ ಮತ್ತೊಬ್ಬ ಇಂಟೀರಿಯರ್ ಡಿಸೈನಿಂಗ್ ಕೆಲಸಗಾರ ಎಂದು ತಿಳಿದು ಬಂದಿದೆ. ಕುಡಿದ ಅಮಲಿನಲ್ಲಿ ರಾವತ್ ಸಹೋದರರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣದ ವಿಚಾರವಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

 
ಮೊದಲು ಸುನಿಲ್ ರಾವತ್ ಅವರಿಗೆ ಕರೆ ಬಂದಿದ್ದು, ಸಂಜಯ್ ರಾವತ್ ಹಾಗೂ ಅವರ ಸಹೋದರನ ಮೇಲೆ ಗುಂಡಿನ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ರಾವತ್ ಸಹೋದರರು ನೀಡಿದ ಫೋನ್ ನಂಬರ್ ಹಾಗೂ ಕರೆಯ ರೆಕಾರ್ಡಿಂಗ್ ಆಧಾರದ ಮೇಲೆ ಫೋನ್ಗಳ ಸ್ಥಳವನ್ನು ಪತ್ತೆ ಹಚ್ಚಲಾಗಿದೆ. ಅಲ್ಲದೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ