ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ

ಭಾನುವಾರ, 15 ಜನವರಿ 2023 (10:29 IST)
ಮುಂಬೈ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಪತ್ತೆಹಚ್ಚಿದ್ದಾರೆ.

ಆರೋಪಿ ಜೈಲಲ್ಲಿದ್ದುಕೊಂಡೇ ಸಚಿವರ ಕಚೇರಿಗೆ ಫೋನ್ ಕರೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ.

ಕರೆ ಮಾಡಿದಾತನನ್ನು ಜೈಲಿನಲ್ಲಿರುವ ದರೋಡೆಕೋರ ಜಯೇಶ್ ಕಾಂತ ಎಂದು ಗುರುತಿಸಲಾಗಿದೆ. ಆತ ಬೆಳಗಾವಿ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಜೈಲಿನ ಒಳಗಿದ್ದುಕೊಂಡೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ