ಕಾಶ್ಮೀರ ಪ್ರವಾಹ: ಸತ್ತವರ ಸಂಖ್ಯೆ 18ಕ್ಕೆ ಏರಿಕೆ

ಬುಧವಾರ, 1 ಏಪ್ರಿಲ್ 2015 (09:41 IST)
ಭೀಕರ ಮಳೆಯಿಂದಾಗಿ ಕಾಶ್ಮೀರದಲ್ಲಿ ಸಂಭವಿಸಿದ ಪ್ರವಾಹ ಮತ್ತು ಭೂ ಕುಸಿತಕ್ಕೆ ಸತ್ತವರ ಸಂಖ್ಯೆ 18ಕ್ಕೆ ಏರಿದೆ. 

 
ಕಳೆದೆರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದ್ದು, ಅಪಾಯದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರೆದಿದೆ.
 
ಆದರೆ ಮತ್ತೆರಡು ದಿನಗಳಲ್ಲಿ ಪುನಃ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 
 
ಕಳೆದ ವರ್ಷ ಸಹ ಕಾಶ್ಮೀರ ಭೀಕರ ಪ್ರವಾಹಕ್ಕೆ ಸಿಲುಕಿ ನಲುಗಿತ್ತು. ಹೆಚ್ಚಿನ ನೆರವು ಬೇಕಾದಲ್ಲಿ ಪೂರೈಸುವುದಾಗಿ ಗೃಹಸಚಿವರಾದ ರಾಜನಾಥ್ ಸಿಂಗ್ ಸರಕಾರಕ್ಕೆ ಭರವಸೆ ನೀಡಿದ್ದಾರೆ. 
 
ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ವರದಿ ತಯಾರಿಸಿರುವ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಪ್ರಧಾನಿ ಮೋದಿಗೆ ವರದಿ ಸಲ್ಲಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ