ಐಪಿಎಲ್ ಬೆಟ್ಟಿಂಗ್‌ನಲ್ಲಿ ಸಾಲ: ಪತ್ನಿ, ಮಕ್ಕಳಿಗೆ ವಿಷವಿಕ್ಕಿಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ
ಐಪಿಎಲ್ ಬೆಟ್ಟಿಂಗ್ ಗೀಳಿಗೆ ಬಿದ್ದಿದ್ದ ನರಸಿಂಹ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾನೆ. ಇನ್ನು ಸಾಲಗಾರರ ಕಾಟಕ್ಕೆ ಬೇಸತ್ತ ಈತ ಹೆಂಡತಿ ಹಾಗೂ ತನ್ನಿಬ್ಬರು ಮಕ್ಕಳಿಗೆ ವಿಷ ನೀಡಿ ಕೊಲೆ ಮಾಡಿದ್ದಾನೆ. ಅದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥನಾಗಿದ್ದ ಅವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪ್ರಕರಣ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಇನ್ನೂ ಈ ಹಿಂದೆ ಪತಿಯ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಗೀಳಿನಿಂದ 1 ಕೋಟಿ ಸಾಲ ಮಾಡಿ, ಸಾಲಗಾರರ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗದಲ್ಲಿ ನಡೆದಿತ್ತು.