ಜನೌಷಧಿ ಕೇಂದ್ರಗಳನ್ನು 25 ಸಾವಿರಕ್ಕೆ ಹೆಚ್ಚಿಸಲು ನಿರ್ಧಾರ : ನರೇಂದ್ರ ಮೋದಿ

ಬುಧವಾರ, 16 ಆಗಸ್ಟ್ 2023 (10:01 IST)
ನವದೆಹಲಿ : ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ದಿಂದ 25,000ಕ್ಕೆ ಹೆಚ್ಚಿಸಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
 
ಮಂಗಳವಾರ ದೆಹಲಿಯ ಕೆಂಪುಕೋಟೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ಜನರಿಗೆ ಶಕ್ತಿಯನ್ನು ನೀಡಿದೆ. ಅದರಲ್ಲೂ ಮಧ್ಯಮ ವರ್ಗದ ಜನರಿಗೆ ಹೊಸ ಶಕ್ತಿಯನ್ನು ನೀಡಿದೆ. ಯಾರಿಗಾದರೂ ಮಧುಮೇಹವಿದ್ದರೆ ಮಾಸಿಕ 3,000 ರೂ. ಬಿಲ್ ಬರುತ್ತದೆ. ಜನೌಷಧಿ ಕೇಂದ್ರಗಳ ಮೂಲಕ 100 ರೂ. ಬೆಲೆಯ ಔಷಧಿಗಳನ್ನು ಕೇವಲ 10ರಿಂದ 15 ರೂ.ಗೆ ನೀಡುತ್ತಿದ್ದೇವೆ ಎಂದರು.

ಇದೀಗ ಜನೌಷಧಿ ಕೇಂದ್ರಗಳನ್ನು 10,000 ದಿಂದ 25,000ಕ್ಕೆ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸಿದೆ. ಎಲ್ಲರಿಗೂ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳು ಲಭ್ಯವಾಗುವಂತೆ ಮಾಡಲು ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಸಾಮರ್ಥ್ಯವನ್ನು ಜಗತ್ತು ಕಂಡಿದೆ. ಇತರೆ ದೇಶಗಳ ಪೂರೈಕೆ ಸರಪಳಿಗಳು ಅಡ್ಡಿಪಡಿಸಿದಾಗ ನಾವು ಪ್ರಪಂಚದ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದ್ದೇವೆ ಎಂದು ಹೇಳಿದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ