ಕೇಂದ್ರದ ಅಧಿಕೃತ ಭಾಷೆಯಾಗಿ ಘೋಷಿಸಿ : ಸ್ಟಾಲಿನ್

ಶುಕ್ರವಾರ, 27 ಮೇ 2022 (08:31 IST)
ಚೆನ್ನೈ : ದೇಶದಲ್ಲಿ ಹಿಂದಿ ಮತ್ತು ಭಾಷಾ ವೈವಿಧ್ಯತೆಯ ಚರ್ಚೆಯ ನಡುವೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಗುರುವಾರ ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಮದ್ರಾಸ್ ಹೈಕೋರ್ಟ್ನಲ್ಲಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮತ್ತು ಯೋಜನೆಗಳ ಶಂಕುಸ್ಥಾಪನೆ ಕಾಮಗಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಚೆನ್ನೈಗೆ ಮೋದಿ ಆಗಮಿಸಿದ್ದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಟಾಲಿನ್ ಅವರು, ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಮಿಳುನಾಡಿನಲ್ಲಿ ಮೋದಿ ಅವರು ಭಾಗವಹಿಸುತ್ತಿರುವ ಮೊದಲ ಸರ್ಕಾರಿ ಕಾರ್ಯಕ್ರಮ ಇದಾಗಿದೆ. ಅದಕ್ಕೆ ನಾನು ಪ್ರಧಾನಿಯವರಿಗೆ ಸ್ವಾಗತ ಮತ್ತು ಕೃತಜ್ಞತೆಯನ್ನು ಅರ್ಪಿಸುತ್ತಿದ್ದೇನೆ ಎಂದು ತಮಿಳಿನಲ್ಲಿ ಮಾತನ್ನು ಪ್ರಾರಂಭಿಸಿದರು. 

ಹಿಂದಿಯಂತೆ ತಮಿಳನ್ನು ಅಧಿಕೃತ ಭಾಷೆಯಾಗಿ ಮತ್ತು ಮದ್ರಾಸ್ ಹೈಕೋರ್ಟ್ನಲ್ಲಿ ಅಧಿಕೃತ ಭಾಷೆಯನ್ನಾಗಿ ಮಾಡಿ ಎಂದು ಆಗ್ರಹಿಸಿದರು. ತಮಿಳುನಾಡಿನ ಬೆಳವಣಿಗೆಯು ಕೇವಲ ಆರ್ಥಿಕ ಮಾನದಂಡಗಳ ಮೇಲೆ ಮಾತ್ರವಲ್ಲದೆ ಅಂತರ್ಗತ ಬೆಳವಣಿಗೆಯ ‘ದ್ರಾವಿಡ ಮಾದರಿ’ಯನ್ನು ಆಧರಿಸಿದೆ ಎಂದು ತಿಳಿಸಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ