ನನಗೆ ಕಿರುಕುಳ ನೀಡಲಾಗುತ್ತಿದೆ: ಜಯಲಲಿತಾ ಸೋದರ ಸಂಬಂಧಿ ದೀಪಾ ಆರೋಪ
ಸೋಮವಾರ, 13 ಮಾರ್ಚ್ 2017 (10:56 IST)
ಚೆನ್ನೈ: ಶಶಿಕಲಾ ನಟರಾಜನ್ ವಿರುದ್ಧ ತಿರುಗಿ ಬಿದ್ದಿರುವ ಜಯಲಲಿತಾ ಸೋದರ ಸಂಬಂಧಿ ದೀಪಾ ಜಯಕುಮಾರ್ ತಮಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಆರ್ ಕೆ ನಗರ ವಿಧಾನ ಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ದೀಪಾ ಜಯಕುಮಾರ್, ಚುನಾವಣೆಗೆ ಸ್ಪರ್ಧಿಸದಂತೆ ತಮಗೆ ನಿರಂತರ ಬೆದರಿಕೆ ಬರುತ್ತಿದೆ. ಗೂಂಡಾಗಳನ್ನು ಬಿಟ್ಟು ಬೆದರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಆರ್ ಕೆ ನಗರ ಚುನಾವಣೆ ಏಪ್ರಿಲ್ 12 ರಂದು ನಡೆಯಲಿದೆ. ಇದಕ್ಕಾಗಿ ಹಲವರು ನಾಮಪತ್ರ ಸಲ್ಲಿಸಿದ್ದು, ಆಡಳಿತಾರೂಢ ಎಐಎಡಿಎಂಕೆ ಪಕ್ಷದ ನಾಯಕಿ ಶಶಿಕಲಾ ನಟರಾಜನ್ ವಿರುದ್ಧ ತಿರುಗಿಬಿದ್ದಿರುವ ಅಮ್ಮ ಜಯಲಲಿತಾ ಸೋದರ ಸೊಸೆ ಮೇಲೆ ಭಾರೀ ನಿರೀಕ್ಷೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ