ಗಾಂಧೀನಗರ : ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಧಿಸಲಾಗಿದ್ದ 2 ವರ್ಷ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರಿಗೆ ಮತ್ತೆ ರಿಲೀಫ್ ಸಿಕ್ಕಿಲ್ಲ.
ಬೇಸಿಗೆ ರಜೆಯ ನಂತರ ಅಂದರೆ, ಜೂನ್ 4 ರ ಬಳಿಕ ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ತೀರ್ಪು ಪ್ರಕಟಿಸಲಿದ್ದಾರೆ. ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯ ಮೇಲೆ ಆದೇಶ ನೀಡಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆ ನಡೆಸುವವರೆಗೆ ಮಧ್ಯಂತರ ತಡೆ ನೀಡುವಂತೆ ಕೋರಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು.