ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ: ನಾಲ್ವರ ಬಂಧನ

ಸೋಮವಾರ, 1 ಮೇ 2017 (14:10 IST)
ನವದೆಹಲಿ: ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ  ಮನೆ ಮೇಲೆ ದುಷ್ಕರ್ಮಿಗಳು ಗುಂಪೊಂದು ದಾಳಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂದಿಸಿದ್ದಾರೆ.
 

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ತಿವಾರಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮನೆಯಲ್ದಿದ್ದ ಸಿಬ್ಬಂದಿಗಳು ಹಾಗೂ ಕೆಲ ನಾಯಕರ ಮೇಲೆ ದಾಳಿ ನಡೆಸಿದ್ದಾರೆ. ಘಟನೆ ದೃಶ್ಯಾವಳಿಗಳು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಸಿಸಿಟಿವಿ ದೃಶ್ಯಾವಳಿಗಳಲ್ಲಿರುವ ಪ್ರಕಾರ, ಇದ್ದಕ್ಕಿದ್ದಂತೆ ಮನೆಗೆ ನುಗ್ಗಿದ ದುಷ್ಕರ್ಮಿಗಳೊಂದಿಗೆ ಮನೆಯ ಸಿಬ್ಬಂದಿ ಮಾತಿನ ಚಕಮಕಿ ನಡೆಸಿದ್ದಾರೆ. ನಂತರ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮನೋಜ್ ತಿವಾರಿ, ದಾಳಿಯಲ್ಲಿ ನಮ್ಮ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ದಾಳಿಕೋರರ  ಉದ್ದೇಶ ನಿಜಕ್ಕೂ ಭಯಂಕರವಾಗಿದೆ. ಇದರ ಹಿಂದೆ ದೊಡ್ಡ ಪಿತೂರಿಯೇ ಆಡಗಿದೆ. ಇದೊಂದು ದೊಡ್ಡ ಬೆದರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಘಟನೆ ಹಿಂದೆ ಪೊಲೀಸರು ಕೂಡ ಭಾಗಿಯಾಗಿರುವುದರ ಬಗ್ಗೆ ಶಂಕೆಗಳಿವೆ. ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಶಸ್ತ್ರಾಸ್ತ್ರಗಳನ್ನು ತಂದಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ್ನು ನೋಡಿದರೆ, ಸ್ಥಳದಲ್ಲಿ ಪೊಲೀಸ್ ಪೇದೆ ಇರುವುದು ಕಂಡು ಬಂದಿದೆ. ನನಗೆ ಬಂದಿರುವ ಮಾಹಿತಿ ಪ್ರಕಾರ ದುಷ್ಕರ್ಮಿಗಳು ನನಗಾಗಿಯೇ ಮನೆಗೆ ನುಗ್ಗಿದ್ದಾರೆ. ದಾಳಿ ಕುರಿತಂತೆ ನನಗೆ ಯಾವುದೇ ರೀತಿಯ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ