ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 6 ನವಜಾತು ಶಿಶುಗಳು ಸಾವು

sampriya

ಭಾನುವಾರ, 26 ಮೇ 2024 (10:01 IST)
Photo By X
ನವದೆಹಲಿ: ಇಲ್ಲಿನ ವಿವೇಕ್ ವಿಹಾರ್‌ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ನವಜಾತ ಶಿಶುಗಳು ಸಾವನ್ನಪ್ಪಿವೆ.

ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ಒಟ್ಟು 12 ಮಕ್ಕಳನ್ನು ರಕ್ಷಿಸಲಾಗಿದೆ, ಅದರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಒಬ್ಬರು ವೆಂಟಿಲೇಟರ್‌ನಲ್ಲಿದ್ದಾರೆ ಮತ್ತು ಐವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಕ್ಷಿಸಲ್ಪಟ್ಟ ನವಜಾತ ಶಿಶುಗಳನ್ನು ಪೂರ್ವ ದೆಹಲಿಯ ಅಡ್ವಾನ್ಸ್ ಎನ್‌ಐಸಿಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮಾಹಿತಿ ಮೇರೆಗೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಅಗ್ನಿಶಾಮಕ ಅಧಿಕಾರಿ ರಾಜೇಶ್, "ರಾತ್ರಿ 11:32 ಕ್ಕೆ, ಅಗ್ನಿಶಾಮಕ ಸೇವಾ ನಿಯಂತ್ರಣ ಕೊಠಡಿಗೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ಪಡೆಯಿತು ... ಒಟ್ಟು 16 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. 2 ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. , ಒಂದು ಆಸ್ಪತ್ರೆಯ ಕಟ್ಟಡ ಮತ್ತು ಬಲಭಾಗದಲ್ಲಿರುವ ವಸತಿ ಕಟ್ಟಡದ 2 ಮಹಡಿಗಳು ಬೆಂಕಿಗೆ ಆಹುತಿಯಾಗಿವೆ. 11-12 ಜನರನ್ನು ರಕ್ಷಿಸಲಾಗಿದೆ ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ