ಅಬಕಾರಿ ಅಕ್ರಮ ಹಗರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Krishnaveni K

ಸೋಮವಾರ, 1 ಏಪ್ರಿಲ್ 2024 (12:40 IST)
ನವದೆಹಲಿ: ಅಬಕಾರಿ ಅಕ್ರಮ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಏಪ್ರಿಲ್ 15 ರವರೆಗೆ ವಿಸ್ತರಿಸಲಾಗಿದೆ.

ಈ ಬಗ್ಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ. ಅಬಕಾರಿ ಅಕ್ರಮ ಹಗರಣ ಕೇಸ್ ನಲ್ಲಿ ಜಾರಿ ನಿರ್ದೇಶನಲಾಯ (ಇಡಿ) ಕೇಜ್ರಿವಾಲ್‍ ರನ್ನು ಇತ್ತೀಚೆಗೆ ಬಂಧಿಸಿತ್ತು. ಈ ವಿಚಾರವಾಗಿ ಆಪ್ ಪಕ್ಷ ಕೇಂದ್ರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಇಡಿ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಕೇಜ್ರಿವಾಲ್ ರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಮತ್ತಷ್ಟು ತನಿಖೆಗೆ ಇನ್ನೂ 15 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಇಡಿ ಕೋರ್ಟ್ ಗೆ ಮನವಿ ಮಾಡಿತ್ತು. ಇಡಿ ಪರ ವಕೀಲರು, ಕೇಜ್ರಿವಾಲ್ ತನಿಖೆಗೆ ಸಹಕರಿಸುತ್ತಿಲ್ಲ. ಬೇಕೆಂದೇ ಇಲೆಕ್ಟ್ರಾನಿಕ್ ವಸ್ತುಗಳ ಪಾಸ್ ವರ್ಡ್ ಹೇಳದೇ ಸತಾಯಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಕೋರ್ಟ್ ಗೆ ಹಾಜರಾಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿ ಮಾಡುತ್ತಿರುವುದು ದೇಶದ ಒಳಿತಿಗೆ ಒಳ್ಳೆಯದಲ್ಲ ಎಂದಿದ್ದಾರೆ. ಕೋರ್ಟ್ ನಲ್ಲಿ ಸುನಿತಾ ಕೇಜ್ರಿವಾಲ್,  ಎಎಪಿ ನಾಯಕಿ ಅತಿಶಿ, ಸೌರ‍ಭ್ ಭಾರದ್ವಾಜ್ ಕೂಡಾ ಇದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ