ಸ್ವಯಂನಿವೃತ್ತಿ ಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ

ಬುಧವಾರ, 13 ಜುಲೈ 2016 (14:56 IST)
ಕಳೆದ 22 ವರ್ಷಗಳಿಂದ ಆದಾಯ ತೆರಿಗೆ ಇಲಾಖೆಯಲ್ಲಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಸ್ವಯಂ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ.
 
ದೆಹಲಿಯ ಆದಾಯ ತೆರಿಗೆ ಇಲಾಖೆಯಲ್ಲಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಸುನೀತಾ ಕೇಜ್ರಿವಾಲ್, ವರ್ಷಾರಂಭದಲ್ಲಿ ಸ್ವಯಂ ನಿವೃತ್ತಿಗಾಗಿ ಮನವಿ ಮಾಡಿದ್ದರು. ಇದೀಗ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.  
 
ಸುನೀತಾ ಕೇಜ್ರಿವಾಲ್ 20 ವರ್ಷಗಳ ಸೇವೆ ಸಲ್ಲಿಸಿದ್ದರಿಂದ ಅವರು ಪಿಂಚಣಿ ಲಾಭಗಳನ್ನು ಪಡೆಯಲಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ