ದೆಹಲಿ ಕುರುಕ್ಷೇತ್ರಕ್ಕೆ ಮುಹೂರ್ತ ಫಿಕ್ಸ್‌: ಫೆ.5ರಂದು ಮತದಾನ, 8ರಂದು ರಿಸಲ್ಟ್‌

Sampriya

ಮಂಗಳವಾರ, 7 ಜನವರಿ 2025 (14:46 IST)
Photo Courtesy X
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿ ವಿಧಾನಸಭೆ ಚುನಾವಣೆ-2025ರ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ.

ಮಂಗಳವಾರ ಪತ್ರಿಕಾಗೋಷ್ಠಿಯನ್ನು ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದೆಹಲಿ ವಿಧಾನಸಭೆ ಚುನಾವಣೆ-2025ರ ವೇಳಾಪಟ್ಟಿಯನ್ನು ಘೋಷಣೆ ಮಾಡಿದರು.

ಫೆ 5ರಂದು ಮತದಾನ ನಡೆಯಲಿದೆ. ಫೆ.8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜೀವ್ ಕುಮಾರ್ ಹೇಳಿದರು.

ದೆಹಲಿಯಲ್ಲಿ ಸದ್ಯ ಆಮ್ ಆದ್ಮಿ ಪಕ್ಷ ಅಧಿಕಾರದಲ್ಲಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯ
ಅವಧಿ ಫೆಬ್ರವರಿ 23ರಂದು ಅಂತ್ಯಗೊಳ್ಳಲಿದೆ. ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 36 ಬೇಕು. 70 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ದೆಹಲಿ ವಿಧಾನಸಭೆ ಚುನಾವಣೆ ಆಮ್‌ ಆದ್ಮಿ ಪಕ್ಷ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನೇರ ಹಣಾಹಣಿಗೆ ಸಾಕ್ಷಿಯಾಗಲಿದೆ. ಎರಡು ಬಾರಿ ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಎಎಪಿ 3ನೇ ಬಾರಿಯೂ ಚುನಾವಣೆಯಲ್ಲಿ ಜಯಗಳಿಸಿ ಸರ್ಕಾರ ರಚನೆ ಮಾಡುವ ಉತ್ಸಾಹದಲ್ಲಿದೆ.

ಎಎಪಿ ಪಕ್ಷ ದೆಹಲಿ ವಿಧಾನಸಭೆ ಚುನಾವಣೆಗೆ ಎಲ್ಲಾ 70 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲು ಸೇರಿ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ