ಸುನಂದಾ ಪುಷ್ಕರ್ ನಿಗೂಢ ಸಾವು: ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಪಿಐಎಲ್ ವಜಾ
ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣದ ಎಸ್ಐಟಿ ತನಿಖೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸ್ತಕಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಅ.26 ರಂದು ನ್ಯಾಯಮೂರ್ತಿಗಳಾದ ಎಸ್.ಮುರಳೀಧರ್ ಮತ್ತು ಐ.ಎಸ್.ಮೆಹ್ತಾ ಅವರಿದ್ದ ನ್ಯಾಯಪೀಠ ಸುಬ್ರಮಣಿಯನ್ ಸ್ವಾಮಿಗೆ ಛೀಮಾರಿ ಹಾಕಿ, ಅರ್ಜಿಯನ್ನು ವಜಾಗೊಳಿಸಿದೆ. ರಾಜಕೀಯ ಉದ್ದೇಶದೊಂದಿಗೆ ಈ ಪಿಐಎಲ್ ಹೂಡಲಾಗಿದೆ ಎಂದು ನ್ಯಾಯಪೀಠ ಕಿಡಿಕಾರಿದೆ. ಇದನ್ನು ಸಾರ್ವಜನಿಕ ಹಿತಾಸ್ತಕಿ ಅರ್ಜಿ ಎಂದು ಪರಿಗಣಿಸಲು ಸಾಧ್ಯವಿಲ್ಲ ನ್ಯಾಯಪೀಠ ಹೇಳಿದೆ.