ಆಕ್ಸಿಜನ್ ಕೊರತೆ: ದೆಹಲಿ ಸರ್ಕಾರಕ್ಕೆ ಕೋರ್ಟ್ ತಪರಾಕಿ

ಬುಧವಾರ, 28 ಏಪ್ರಿಲ್ 2021 (10:13 IST)
ನವದೆಹಲಿ: ಕೇಂದ್ರ ಸರ್ಕಾರ ಹೊಸದಾಗಿ ಆಕ್ಸಿಜನ್ ಘಟಕ ತಯಾರಿಸಿ, ವಿದೇಶಗಳಿಂದ ಆಮದು ಮಾಡಿಕೊಂಡು ಏನೇನೋ ವ್ಯವಸ್ಥೆ ಮಾಡಿದರೂ ದೆಹಲಿಯ ಆಸ್ಪತ್ರೆಯಲ್ಲಿ ಮತ್ತೆ ಆಕ್ಸಿಜನ್ ಕೊರತೆ ಕಂಡುಬಂದಿದೆ. ಈ ವಿಚಾರವಾಗಿ ದೆಹಲಿ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.


ದೆಹಲಿಯ ಶಾಂತಿ ನಿಕೇತನ್ ಆಸ್ಪತ್ರೆ ಈ ಸಂಬಂಧವಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ನಮಗೆ ಮತ್ತೆ ಆಕ್ಸಿಜನ್ ಪೂರೈಕೆಯಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದೆ. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ದೆಹಲಿ ಸರ್ಕಾರವನ್ನು ಪ್ರಶ್ನೆ ಮಾಡಿದೆ.

ಅಲ್ಲದೆ, ಆಕ್ಸಿಜನ್ ಪೂರೈಕೆಗೆ ಅಡ್ಡಿ ಮಾಡುತ್ತಿರುವವರ ವಿರುದ್ಧ ನಿರ್ದ್ಯಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಿ. ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಿ ಎಂದು ತಾಕೀತು ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ