Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Krishnaveni K

ಶನಿವಾರ, 19 ಏಪ್ರಿಲ್ 2025 (09:53 IST)
Photo Credit: X
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ್ದು, ಇನ್ನಷ್ಟು ಜನ ಸಿಲುಕಿರುವ ಶಂಕೆಯಿದೆ. ಇದೀಗ ಮನೆ ಕುಸಿಯುತ್ತಿರುವ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇಂದು ಬೆಳಗಿನ ಜಾವ ಘಟನೆ ನಡೆದಿದೆ. 4 ಅಂತಸ್ತುಗಳ ಕಟ್ಟಡ ಕುಸಿದಿದ್ದು ನಾಲ್ವರು ಮೃತಪಟ್ಟಿರುವುದು ಖಚಿತವಾಗಿದೆ. 18 ಮಂದಿಯನ್ನು ರಕ್ಷಿಸಲಾಗಿದೆ. 10 ಕ್ಕೂ ಹೆಚ್ಚು ಮಂದಿ ಇನ್ನೂ ಮನೆಯೊಳಗೆ ಸಿಲುಕಿಕೊಂಡಿರುವ ಶಂಕೆಯಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

 
ಈಶಾನ್ಯ ದೆಹಲಿಯ ದಯಾಲ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತಪಟ್ಟವರಲ್ಲಿ 9 ತಿಂಗಳ ಮಗುವೂ ಸೇರಿಕೊಂಡಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಕಟ್ಟಡ ಕುಸಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೆಹಲಿಯಲ್ಲಿ ಇತ್ತೀಚೆಗೆ ವಿಪರೀತ ಮಳೆಯಾಗಿತ್ತು. ಇದರಿಂದಾಗಿಯೇ ಕಟ್ಟಡ ಕುಸಿದಿರಬಹುದು ಎಂದು ಶಂಕಿಸಲಾಗಿದೆ. ತನಿಖೆ ನಡೆಯುತ್ತಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ