ವಿಶ್ವಮಟ್ಟದಲ್ಲಿ ದಾಖಲೆ ಪುಟ ಸೇರಿದ ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣ

Sampriya

ಮಂಗಳವಾರ, 8 ಜುಲೈ 2025 (17:40 IST)
Photo Credit X
ನವದೆಹಲಿ: ದೆಹಲಿ ವಿಮಾನ ನಿಲ್ದಾಣವು ವಿಶ್ವದ 9 ನೇ ಜನನಿಬಿಡ ವಿಮಾನ ನಿಲ್ದಾಣವಾಗಿದೆ, 2024 ರಲ್ಲಿ 7.7 ಕೋಟಿ ಪ್ರಯಾಣಿಕರನ್ನು ನಿಭಾಯಿಸುತ್ತದೆ ಎಂದು ಮಂಗಳವಾರ ಬಿಡುಗಡೆಯಾದ ವರದಿ ತಿಳಿಸಿದೆ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿಯು ವಿಶ್ವದ 20 ಜನನಿಬಿಡ ವಿಮಾನ ನಿಲ್ದಾಣಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಮೆರಿಕದ ಅಟ್ಲಾಂಟಾ ವಿಮಾನ ನಿಲ್ದಾಣವು ಅಗ್ರಸ್ಥಾನದಲ್ಲಿದೆ. ಈ ವಿಮಾನ ನಿಲ್ದಾಣದಿಂದ 10.80 ಕೋಟಿಗೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ಎರಡನೇ ಸ್ಥಾನದಲ್ಲಿರುವ ದುಬೈ ವಿಮಾನ ನಿಲ್ದಾಣದಿಂದ 9.23 ಕೋಟಿಗೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದರೆ, ಇತ್ತ ಮೂರನೇ ಸ್ಥಾನದಲ್ಲಿರುವ ಡಲ್ಲಾಸ್/ಫೋರ್ಟ್ ವರ್ತ್ ವಿಮಾನ ನಿಲ್ದಾಣದಿಂದ 8.78 ಕೋಟಿಗೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದು ವರದಿಯಾಗಿದೆ.

2024ರಲ್ಲಿ ಜಾಗತಿಕ ಪ್ರಯಾಣಿಕರ ಸಂಖ್ಯೆ ಗರಿಷ್ಠ ಮಟ್ಟ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 7.78 ಕೋಟಿಗೂ ಅಧಿಕ ಪ್ರಯಾಣಿಕರು ಪ್ರಯಾಣಿಸಿದ್ದಾರೆ. 2023ರಲ್ಲಿ 10ನೇ ಸ್ಥಾನದಲ್ಲಿದ್ದ ಐಜಿಐಎ ಶ್ರೇಯಾಂಕವು 2024ರಲ್ಲಿ 9ನೇ ಸ್ಥಾನಕ್ಕೆ ಸುಧಾರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ