ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಗೆ ವಾರ್ತಾ ಆಯುಕ್ತರಾಗಿ ಬಡ್ತಿ ನೀಡಲಿರುವ ಮೋದಿ ಸರಕಾರ

ಬುಧವಾರ, 17 ಫೆಬ್ರವರಿ 2016 (16:46 IST)
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಕರಣ ನಿಭಾಯಿಸುವಲ್ಲಿ ದೆಹಲಿ ಪೊಲೀಸರು ವಿಫಲವಾಗಿದ್ದಾರೆ ಎನ್ನುವ ಆರೋಪಗಳ ಮಧ್ಯೆಯೇ, ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿಯವರಿಗೆ ಬಡ್ತಿ ದೊರೆಯುವ ಸಾಧ್ಯತೆಗಳಿವೆ.
 
ಮೂಲಗಳ ಪ್ರಕಾರ, ಆಯ್ಕೆ ಸಮಿತಿ ಫೆಬ್ರವರಿ 19 ರಂದು ನೂತನ ವಾರ್ತಾ ಇಲಾಖೆಯ ಆಯುಕ್ತರನ್ನು ಆಯ್ಕೆ ಮಾಡಲಿದ್ದು, ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
 
ಗಮನಾರ್ಹ ವಿಷಯವೆಂದರೆ, ಬಸ್ಸಿ ಫೆಬ್ರವರಿ ಅಂತ್ಯಕ್ಕೆ ಪೊಲೀಸ್ ಸೇವೆಯಿಂದ ನಿವೃತ್ತರಾಗಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.  
 
ಬೆಳವಣಿಗೆಗಳ ಬಗ್ಗೆ ಮಾತನಾಡಿದ ಆಮ್ ಆದ್ಮಿ ಪಕ್ಷದ ಮುಖಂಡ ಅಶುತೋಷ್, ದೆಹಲಿ ಪೊಲೀಸ್ ಆಯುಕ್ತರಾಗಿದ್ದಾಗ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸದ ಬಿ.ಎಸ್.ಬಸ್ಸಿಯವರಿಗೆ ಬಡ್ತಿ ನೀಡುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
 
ಕೇಂದ್ರ ಸರಕಾರವನ್ನು ಬೆಂಬಲಿಸುವ ಅಧಿಕಾರಿಗಳಿಗೆ ಬಡ್ತಿ ನೀಡಲಾಗುವುದು ಎನ್ನುವುದನ್ನು ತೋರಿಸುತ್ತದೆ. ಪೊಲೀಸ್ ಆಯುಕ್ತ ಬಸ್ಸಿ ಕೇಂದ್ರ ಸರಕಾರದ ಹಿರಿಯ ಮುಖಂಡರ ಕೈಗೊಂಬೆಯಂತೆ ವರ್ತಿಸುತ್ತಿದ್ದರು ಎಂದು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ