ದೆಹಲಿ ಸೇವಾ ಮಸೂದೆ ರಾಜ್ಯಸಭೆಯಲ್ಲಿ ಪಾಸ್

ಬುಧವಾರ, 9 ಆಗಸ್ಟ್ 2023 (15:05 IST)
ನವದೆಹಲಿ : ಆಮ್ ಆದ್ಮ ಪಕ್ಷ ಮತ್ತು ಕೇಂದ್ರ ಸರ್ಕಾರದ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ, 2023 ರಾಜ್ಯಸಭೆಯಲ್ಲಿ ಪಾಸ್ ಆಗಿದೆ.
 
ಗೃಹ ಸಚಿವ ಅಮಿತ್ ಶಾ ಈ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದರು. ಮಸೂದೆಯ ಪರ 131 ಮತಗಳು ಬಿದ್ದರೆ, 102 ಮತಗಳು ವಿರುದ್ಧ ಚಲಾವಣೆಯಾದವು. ಬಿಜೆಡಿ ಮತ್ತು ವೈಎಸ್ಆರ್ ಕಾಂಗ್ರೆಸ್ ಸದಸ್ಯರು ಬೆಂಬಲ ನೀಡಿದ್ದರಿಂದ ಮಸೂದೆ ಪಾಸ್ ಆಗಿದೆ. ಈ ಮಸೂದೆಗೆ ರಾಷ್ಟ್ರಪತಿಗಳ ಸಹಿ ಬಿದ್ದ ಬಳಿಕ ಅಧಿಕೃತ ಕಾನೂನಾಗಿ ಜಾರಿಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ