ನೋಟು ನಿಷೇಧ: ಸಿಎಂ ನಿತೀಶ್ ಕುಮಾರ್‌ರನ್ನು ಗದ್ದಾರ್ ಎಂದ ಮಮತಾ ಬ್ಯಾನರ್ಜಿ

ಗುರುವಾರ, 1 ಡಿಸೆಂಬರ್ 2016 (12:43 IST)
ಕೇಂದ್ರ ಸರಕಾರದ ನೋಟು ನಿಷೇಧವನ್ನು ಕೆಲ ಗದ್ದಾರ್ ರಾಜಕೀಯ ಪಕ್ಷಗಳು ನಿರ್ಧರಿಸಿವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪರೋಕ್ಷವಾಗಿ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಕಪ್ಪುಹಣವನ್ನು ನಿಯಂತ್ರಿಸಲು ಕೇಂದ್ರ ಸರಕಾರ ತೆಗೆದುಕೊಂಡ ನಿಲುವು ಸರಿಯಾಗಿದೆ ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೇಂದ್ರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
 
ನೋಟು ನಿಷೇಧದಿಂದಾಗಿ ದೇಶದ ಜನತೆ ತೊಂದರೆ ಎದುರಿಸುತ್ತಿರುವುದರಿಂದ ಎಲ್ಲಾ ರಾಜಕೀಯ ಪಕ್ಷಗಳು ವಿರೋಧಿಸಬೇಕು. ಗದ್ದಾರಿ(ವಿದ್ರೋಹ) ಮಾಡುವ ಪಕ್ಷಗಳನ್ನು ಜನತೆ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
 
ಪಾಟ್ನಾದಲ್ಲಿ ನೋಟು ನಿಷೇಧ ವಿರೋಧಿಸಿ ಧರಣಿ ನಡೆಸಿದ ಮಮತಾ ಬ್ಯಾನರ್ಜಿ, ಧರಣಿಯನ್ನು ಬೆಂಬಲಿಸಿದ್ದಕ್ಕಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಅಭಿನಂದಿಸಿದರು
 
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗದ ಮಮತಾ ಲಾಲು ಮತ್ತು ಅವರ ಪತ್ನಿ ರಾಬ್ಡಿದೇವಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
 
ಹಳೆಯ ನೋಟುಗಳು ಬದಲಾಗಿ ಸಂಪೂರ್ಣವಾಗಿ ಹೊಸ ನೋಟುಗಳು ಬರುವವರೆಗೆ ಪ್ರಧಾನಿ ಮೋದಿ ಅಧಿಕಾರದಲ್ಲಿರುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ