ಡೆಂಗ್ಯೂ ಜ್ವರದಿಂದ ಮೃತಪಟ್ಟವರ ಸಂಖ್ಯೆ 63ಕ್ಕೆ ಏರಿಕೆ

ಭಾನುವಾರ, 26 ಸೆಪ್ಟಂಬರ್ 2021 (10:06 IST)
ಫಿರೋಝಾಬಾದ್, ಸೆ. 26 : ನಿಗೂಢ ಜ್ವರ ಹಾಗೂ ಡೆಂಗ್ಯೂ ಜ್ವರದಿಂದಾಗಿ ಉತ್ತರಪ್ರದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ. ಇಲ್ಲಿನ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿಯೋರ್ವಳು ಮೃತಪಟ್ಟಿದ್ದಾಳೆ ಎಂದು ಸರಕಾರದ ಹೇಳಿಕೆ ತಿಳಿಸಿದೆ.

ವೈದ್ಯಕೀಯ ಕಾಲೇಜು ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ 225ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 154ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಲಾಗಿದೆ.ಯಶಸ್ವಿ ಚಿಕಿತ್ಸೆ ಬಳಿಕ 153ಕ್ಕೂ ಅಧಿಕ ರೋಗಿಗಳನ್ನು ಶನಿವಾರ ಬಿಡುಗಡೆ ಮಾಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ. ಸಂಗೀತಾ ಅನೇಜಾ ತಿಳಿಸಿದ್ದಾರೆ. ಈ ನಡುವೆ, ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ತೋರಿಸಿದ ಪರಿಣಾಮ 12 ವರ್ಷದ ತನ್ನ ಸಹೋದರಿ ಮೃತಪಟ್ಟಿದ್ದಾಳೆ ಎಂದು ದೀಪಕ್ ಎಂಬವರು ಆರೋಪಿಸಿದ್ದಾರೆ. ಇದಲ್ಲದೆ, ಬಾಲಕಿಯ ಪೋಷಕರು ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿ ಆಸ್ಪತ್ರೆಯ ಸಿಬ್ಬಂದಿ ತಮಗೆ ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕುಟುಂಬದ ಸದಸ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ನಡುವೆ ನಡೆದ ಘರ್ಷಣೆಯ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಎಸ್ಎಚ್ಒ ಅಧಿಕಾರಿ (ಉತ್ತರಪ್ರದೇಶ) ಆನಂದ್ ಕುಮಾರ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ