ನವದೆಹಲಿ : ಸ್ವಿಜರ್ಲೆಂಡ್ನಲ್ಲಿರುವ ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರ ಭಾರತೀಯರ ಹೂಡಿಕೆ, ಡಿಪಾಸಿಟ್ ಪ್ರಮಾಣ ಇಳಿಕೆಯಾಗಿದೆ.
2021ಕ್ಕೆ ಹೋಲಿಸಿದರೆ 11% ರಷ್ಟು ಕುಸಿತ ಕಂಡಿದ್ದು, ಪ್ರಸ್ತುತ 3.42 ಶತಕೋಟಿ ಫ್ರಾಂಕ್ (ಅಂದಾಜು 30 ಸಾವಿರ ಕೋಟಿ ರೂ.) ಇಳಿಕೆಯಾಗಿದೆ ಎಂದು ಸ್ವಿಸ್ ಕೇಂದ್ರೀಯ ಬ್ಯಾಂಕ್ನ ವಾರ್ಷಿಕ ದತ್ತಾಂಶ ವರದಿ ತಿಳಿಸಿದೆ.
2021ರಲ್ಲಿ ಭಾರತೀಯರು, ಭಾರತ ಮೂಲದ ಬ್ಯಾಂಚ್ಗಳು ಮತ್ತು ಹಣಕಾಸು ಸಂಸ್ಥೆಗಳ ಒಟ್ಟು ಬಂಡವಾಳ 35 ಸಾವಿರ ಕೋಟಿ ರೂ.ಗೆ ಏರಿಕೆಯಾಗಿತ್ತು. ಇದು 14 ವರ್ಷಗಳಲ್ಲೇ ಗರಿಷ್ಠ ಬಂಡವಾಳ ಸಂಗ್ರಹ ಎನಿಸಿಕೊಂಡಿತ್ತು. ಬಂಡವಾಳ ಕಡಿಮೆಯಾದ ಹಿನ್ನೆಲೆಯಲ್ಲಿ ಕಳೆದ ವರ್ಷ 44ನೇ ಸ್ಥಾನದಲ್ಲಿ ಭಾರತ ಈ ಬಾರಿ 46ನೇ ಸ್ಥಾನ ಪಡೆದಿದೆ.
ಸ್ವಯಂಚಾಲಿತ ಮಾಹಿತಿ ವಿನಿಮಯ ಚೌಕಟ್ಟಿನ ಅಡಿಯಲ್ಲಿ ಭಾರತವು ಸ್ವಿಸ್ ಬ್ಯಾಂಕ್ ಖಾತೆಗಳ ವಿವರಗಳ ನಾಲ್ಕನೇ ಪಟ್ಟಿಯನ್ನು 2022ರ ಅಕ್ಟೋಬರ್ನಲ್ಲಿ ಪಡೆದಿತ್ತು. ಈ ವರ್ಷದ ಸೆಪ್ಟೆಂಬರ್ನಲ್ಲಿ ಐದನೇ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆಯಿದೆ.