ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆಗೆ ಗಡುವು

ಮಂಗಳವಾರ, 11 ಜುಲೈ 2017 (19:25 IST)
ಭ್ರಷ್ಟಾಚಾರ ಆರೋಪದಡಿ ಸಿಲುಕಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ನಾಲ್ಕು ದಿನಗಳೊಳಗೆ ರಾಜೀನಾಮೆ ನೀಡುವಂತೆ ರಾಷ್ಟ್ರೀಯ ಜನತಾ ದಳ ಪಕ್ಷಕ್ಕೆ ಜೆಡಿಯು ಗಡುವು ನೀಡಿದೆ.
 
ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆ ನೀಡಿದಲ್ಲಿ ಮಹಾಮೈತ್ರಿಕೂಟದಲ್ಲಿ ಭಾರಿ ಬಿರುಕು ಉಂಟಾಗುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್, ತೇಜಸ್ವಿ ಬಗ್ಗೆ ಯಾವುದೇ ಹೇಳಿಕೆ ನೀಡದಿದ್ದರೂ ಜೆಡಿಯು ಪಕ್ಷದ ನಾಯಕರು ತೇಜಸ್ವಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.
 
ಕಳೆದ ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಮಹಾಮೈತ್ರಿಕೂಟ ರಚಿಸಿಕೊಂಡಿದ್ದ ಕಾಂಗ್ರೆಸ್, ಆರ್‌ಜೆಡಿ ಮತ್ತು ಜೆಡಿಯು ಪಕ್ಷಗಳು ಒಂದಾಗಿ ಚುನಾವಣೆ ಎದುರಿಸಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಅಧಿಕಾರದ ಗದ್ದುಗೆ ಹಿಡಿದಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ