ಬಿಪಿಎಲ್ ಪಟ್ಟಿಗೆ ಸೇರ್ಪಡೆ: ಕೇಂದ್ರ, ರಾಜ್ಯ ಸರಕಾರ ಸಂಚು ಎಂದ ದಿಗ್ವಿಜಯ್ ಸಿಂಗ್

ಶನಿವಾರ, 23 ಜುಲೈ 2016 (13:36 IST)
ಕೇಂದ್ರ ಸರಕಾರ ಮತ್ತು ಮಧ್ಯಪ್ರದೇಶದ ರಾಜ್ಯ ಸರಕಾರ ನನ್ನ ಕುಟುಂಬದ ಹೆಸರನ್ನು ಉದ್ದೇಶಪೂರ್ವಕವಾಗಿ ಬಿಪಿಎಲ್ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಸಂಚು ರೂಪಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
 
ನನ್ನ ಸಹೋದರ ಮತ್ತು ಪುತ್ರನ ಹೆಸರನ್ನು ಕೂಡಾ ಬಿಪಿಎಲ್ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ನಾವು ಆದಾಯ ತೆರಿಗೆ ಪಾವತಿದಾರರು ಎನ್ನುವುದನ್ನು ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಗೋವಾದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಸಮನ್ವತೆ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ದಿಗ್ವಿಜಯ್ ಸಿಂಗ್, ನಮ್ಮ ಕುಟುಂಬದ ಹೆಸರನ್ನು ಬಿಪಿಎಲ್‌ ಪಟ್ಟಿಗೆ ಸೇರ್ಪಡೆಗೊಳಿಸುವ ಹಿಂದೆ ಸಂಚು ಅಡಗಿದೆ ಎಂದರು.
 
69 ವರ್ಷ ವಯಸ್ಸಿನ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿ, ನಾವು ಬಿಪಿಎಲ್ ಕಾರ್ಡ್ ನೀಡುವಂತೆ ಅರ್ಜಿ ಸಲ್ಲಿಸಿಲ್ಲ. ಅಥವಾ ಬಿಪಿಎಲ್‌ನ ಯಾವುದೇ ಲಾಭ ಪಡೆದಿಲ್ಲ ಎಂದು ತಿಳಿಸಿದ್ದಾರೆ.
 
ಮುಂದಿನ ವರ್ಷದ ಆರಂಭದಲ್ಲಿ ಗೋವಾ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಚುನಾವಣೆಯ ರಣತಂತ್ರದ ಬಗ್ಗೆ ಚರ್ಚಿಸಲು ಹಿರಿಯ ಕಾಂಗ್ರೆಸ್ ನಾಯಕರು ಗೋವಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ