ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ದಿನೇಶ್ ಕುಮಾರ್‌

Sampriya

ಶುಕ್ರವಾರ, 19 ಏಪ್ರಿಲ್ 2024 (15:13 IST)
photo Courtesy X
ನವದೆಹಲಿ: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಇದೇ 30ರಂದು ಪ್ರಸ್ತುತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಅವರು ನಿವೃತ್ತಿಯಾಗಲಿರುವ ಹಿನ್ನೆಲೆ ಅಂದೇ ದಿನೇಶ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

1964ರ ಮೇ 15 ರಂದು ಜನಿಸಿದ ತ್ರಿಪಾಠಿ ಅವರು, ಖಡಕ್‌ವಾಸ್ಲಾದ ಸೈನಿಕ್ ಸ್ಕೂಲ್ ರೇವಾ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. 1985ರಲ್ಲಿ ಅವರನ್ನು ಭಾರತೀಯ ನೌಕಾಪಡೆಯ ಕಾರ್ಯನಿರ್ವಾಹಕ ಶಾಖೆಗೆ ನಿಯೋಜಿಸಲಾಯಿತು.

ಸಂವಹನ ಮತ್ತು ಎಲೆಕ್ಟ್ರಾನಿಕ್ ಯುದ್ಧ ತಜ್ಞರಾದ ಇವರು ಸುಮಾರು 30 ವರ್ಷಗಳ ಕಾಲ ಸುದೀರ್ಘ ಸೇವಾ ಅನುಭವ ಹೊಂದಿದ್ದಾರೆ. ಜತೆಗೆ ಅತಿ ವಿಶಿಷ್ಟ ಸೇವಾ ಪದಕ ಮತ್ತು ನವೋ ಸೇನಾ ಪದಕಗಳು ಇವರ ಸಾಧನೆಗೆ ಲಭಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ