ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನ

geetha

ಬುಧವಾರ, 17 ಜನವರಿ 2024 (19:06 IST)
ನವದೆಹಲಿ : ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರತಿಷ್ಠಾಪನಾ ಕಾರ್ಯ ಜ .22 ರಂದು ನಡೆಯುತ್ತಿದ್ದು ಕೇವಲ ಐದು ದಿನಗಳಷ್ಟೇ ಬಾಕಿ ಉಳಿದಿದೆ. ದೇಶ ವಿದೇಶಗಳಿಂದ ಕೋಟ್ಯಂತರ ಭಕ್ತರು ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಅಯೋಧ್ಯೆಯಲ್ಲಿ ಸೂಕ್ತ ಸಿದ್ದತಾ ಕಾರ್ಯಗಳು ನಡೆಯುತ್ತಿವೆ. 
 
ದೇಶದ ವಿವಿಧ ನಗರಗಳಿಂದ ಅಯೋಧ್ಯೆಗೆ ತಲುಪಲು ಭಕ್ತಾದಿಗಳಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ರೈಲು ಮತ್ತು ಬಸ್‌ ಗಳು ಈಗಾಗಲೇ ಭರ್ತಿಯಾಗಿವೆ. 

ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧ್ಯಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಬುಧವಾರ ಬೆಂಗಳೂರು -ಅಯೋಧ್ಯಾ ನಡುವಿನ ವಿಮಾನ ಸಂಚಾರಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ದಾರೆ. ಇದೇ ವೇಳೆ ಕೋಲ್ಕತ್ತಾ – ಅಯೋಧ್ಯೆ ನಡುವಿನ ವಿಮಾನ ಸಂಚಾರಕ್ಕೂ ಸಹ ಚಾಲನೆ ನೀಡಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ