ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸತ್ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ವಾಪಸ್ ಪಡೆದಿದ್ದಾರೆ.
ಈ ಮೂಲಕ ರಾಹುಲ್ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಿರ್ಧಾರ ಕೈಗೊಂಡಿದ್ದಾರೆ.
ಮಾನನಷ್ಟ ಪ್ರಕರಣದಲ್ಲಿ ಸೂರತ್ ಜಿಲ್ಲಾ ನ್ಯಾಯಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬಳಿಕ ಜನಪ್ರತಿನಿಧಿ ಕಾಯ್ದೆಯಡಿ ಕಳೆದ ಮಾರ್ಚ್ ನಲ್ಲಿ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಲಾಗಿತ್ತು.