ಕೊರೊನಾವೈರಸ್ ಲಸಿಕೆ ವಿತರಣೆ ಮುಖೇನ ಸೋಂಕು ಹರಡುವಿಕೆ ಮತ್ತು ಸೋಂಕಿನ ಅಪಾಯವನ್ನು ತಗ್ಗಿಸುವ ಪ್ರಯತ್ನ ಮುಂದುವರಿದಿದೆ. ದೇಶದಲ್ಲಿ ಲಸಿಕೆ ವಿತರಣೆ ಅಭಿಯಾನ ಶುರುವಾಗಿ 255 ದಿನಗಳಾಗಿದ್ದು, ಸೋಮವಾರ ರಾತ್ರಿ 7 ಗಂಟೆ ವೇಳೆಗೆ 88,98,560 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 84,50,28,655 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.
ಭಾರತದಲ್ಲಿ ಈವರೆಗೂ 86,93,79,970 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 63,86,88,470 ಮಂದಿಗೆ ಮೊದಲ ಡೋಸ್ ಹಾಗೂ 23,06,91,500 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?:
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,71,843 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 88,50,671 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,50,000 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,48,77,142 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
18 ವರ್ಷ ಮೇಲ್ಪಟ್ಟ 35,22,02,434 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,69,64,427 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,74,83,194 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,48,10,270 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 63,86,88,470 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 23,06,91,500 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾವೈರಸ್ ಲಸಿಕೆ ಹಂತಗಳು ಎಷ್ಟಿದೆ?:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.
ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ
2021ರ ಸಪ್ಟೆಂಬರ್ 27ರ ಅಂಕಿ-ಅಂಶಗಳ ಪ್ರಕಾರ, 84,50,28,655 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 84,50,28,655
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 20,95,870
* ಕೊವಿಡ್-19 ಲಸಿಕೆಯ ಲಭ್ಯತೆ - 4,74,80,540