ರಾಜಕೀಯ ಬಿಕ್ಕಟ್ಟು: ಪ್ರಧಾನಿ ಭೇಟಿಗೆ ಮುಂದಾದ ಎಂ.ಕೆ.ಸ್ಟಾಲಿನ್

ಬುಧವಾರ, 8 ಫೆಬ್ರವರಿ 2017 (08:25 IST)
ನಿಯೋಜಿತ ಮುಖ್ಯಮಂತ್ರಿ ಶಶಿಕಲಾ ನಟರಾಜನ್ ಪದಗ್ರಹಣಕ್ಕೆ ಡಿಎಂಕೆ ನಾಯಕರು ವಿರುದ್ಧ ವ್ಯಕ್ತಪಡಿಸಿದ್ದು, ಇಂದು ಕರುಣಾನಿಧಿ ಪುತ್ರ ಹಾಗೂ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.
 
ಚಿನ್ನಮ್ಮ ಶಶಿಕಲಾ ನಟರಾಜನ್ ವಿರುದ್ಧ ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಬಂಡಾಯದ ಹಿನ್ನೆಲೆಯಲ್ಲಿ ಬಹುಮತ ಸಾಬೀತು ಪಡೆಸುವಂತೆ ಡಿಎಂಕೆ ನಾಯಕರು ಆಗ್ರಹಿಸಿದ್ದು, ಇಂದು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಅವರು ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. 
 
ಅಮ್ಮ ಜಯಲಲಿತಾ ನಿಧನದ ಹಿನ್ನೆಲೆಯಲ್ಲಿ ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಶಶಿಕಲಾ ನಟರಾಜನ್ ಅವರ ಬಲವಂತವೇ ಕಾರಣ ಎಂದು ಮಾಜಿ ಸಿಎಂ ಪನ್ನೀರ್ ಸೆಲ್ವಂ ಅವರು ಚಿನ್ನಮ್ಮನ ವಿರುದ್ಧ ಬಂಡಾಯದ ಕಹಳೆ ಊದಿದ್ದರು.
 
ಈ ಎಲ್ಲ ರಾಜಕೀಯ ಬೆಳವಣಿಗೆಗಳ ನಡುವೆ ಚಿನ್ನಮ್ಮ ಶಶಿಕಲಾ ನಟರಾಜನ್ ಅವರು ಇಂದು ಮುಂಜಾನೆ 10 ಗಂಟೆಗೆ ಶಾಸಕ ಸಭೆ ಕರೆದು ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. 

ವೆಬ್ದುನಿಯಾವನ್ನು ಓದಿ