ಚಿಕಿತ್ಸೆಯ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದ ವೈದ್ಯ ಮಾಡಿದ್ದೇನು ಗೊತ್ತಾ?

ಮಂಗಳವಾರ, 13 ನವೆಂಬರ್ 2018 (06:52 IST)
ಲಕ್ನೋ : ವೈದ್ಯನೊಬ್ಬ ಅಪ್ರಾಪ್ತ ಬಾಲಕಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಕರೆದೊಯ್ದು ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಶಹಜಹಾನ್‍ಪುರದಲ್ಲಿ ನಡೆದಿದೆ.


ಆರೋಪಿ ವೈದ್ಯನ ಹೆಸರು ವಿನೋದ್ ಕುಮಾರ್ ಎಂಬುದಾಗಿ ತಿಳಿದುಬಂದಿದ್ದು, ಈತ ಬಾಲಕಿಯೊಬ್ಬಳಿಗೆ ಚಿಕಿತ್ಸೆ ಹಾಗೂ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು, ಸಣ್ಣ ಕೋಣೆಯೊಂದರಲ್ಲಿ ಕೂಡಿಹಾಕಿ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.


ನಂತರ ಬಾಲಕಿ ಆತನ ಬಂಧನದಿಂದ ಬಿಡಿಸಿಕೊಂಡು ಬಂದು ಪೋಷಕರಿಗೆ ಈ ವಿಚಾರ ತಿಳಿಸಿದ್ದು, ಪೋಷಕರು ಸ್ಥಳೀಯ ಪೊಲೀಸ್ ಠಾಣೆಗೆ ಹೋದಾಗ, ಪೊಲೀಸರು ದೂರು ಪಡೆಯಲು ನಿರಾಕರಿಸಿ ಆರೋಪವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.


ನಂತರ ಪೋಷಕರು ಪೊಲೀಸ್ ಅಧಿಕಾರಿಗಳ ಬಳಿ ತೆರಳಿ ವೈದ್ಯನ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ