ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುವ ಮೂಲಕ ಅಚ್ಚರಿ ಮೂಡಿಸಿದರು.
ತಮ್ಮ ಬಸ್ ನಲ್ಲಿ ಮುಖ್ಯಮಂತ್ರಿಗಳನ್ನು ಕಂಡ ಸಾರ್ವಜನಿಕರು ಮತ್ತು ಸಾರಿಗೆ ಸಿಬ್ಬಂದಿ ಸಹ ಒಂದು ಕ್ಷಣ ಶಾಕ್ ಆಗಿದ್ದರು. ಚೆನ್ನೈನಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ಉಚಿತ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರಿಂದ ಯೋಜನೆಯ ಅನುಕೂಲತೆ ಬಗ್ಗೆ ತಿಳಿದುಕೊಂಡರು. ಜೊತೆಗೆ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಆರನೇ ಕೊರೊನಾ ಲಸಿಕಾಕರಣ ಅಭಿಯಾನದ ಭಾಗವಾಗಿ ಕನ್ನಗಿ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸ್ಟಾಲಿನ್ ಬಸ್ ನಲ್ಲಿಯೇ ಪ್ರಯಾಣಿಸಿದರು.