ಟಿವಿ ನೋಡಲು ಮನೆಗೆ ಬಂದ ಅಪ್ರಾಪ್ತನೊಬ್ಬ ಮಾಡಿದ್ದೇನು ಗೊತ್ತಾ?

ಶುಕ್ರವಾರ, 17 ಆಗಸ್ಟ್ 2018 (14:11 IST)
ಮಧ್ಯಪ್ರದೇಶ : ಇತ್ತೀಚೆಗೆ  ಮಧ್ಯಪ್ರದೇಶದಲ್ಲಿ ಅಪ್ರಾಪ್ತೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿದ್ದು, ಇದೀಗ ನಾಲ್ಕು ವರ್ಷದ ಬಾಲಕಿ ಮೇಲೆ ಅಪ್ರಾಪ್ತಯೊಬ್ಬ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ.


ಮಧ್ಯಪ್ರದೇಶದ ಉಜ್ಜಯನಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ, ಪೀಡಿತೆ ಮನೆಗೆ ಟಿವಿ ನೋಡಲು ಬಂದು ಇಂತಹ ದುಷ್ಕೃತ್ಯ ಎಸಗಿದ್ದಾನೆ. ಯಾವಾಗಲೂ ಆಕೆಯ ಮನೆಗೆ ಟಿವಿ ನೋಡಲು ಬರುತ್ತಿದ್ದ ಆತ ಅಂದು ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.


ಮನೆಗೆ ಬಂದ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇದೀಗ ಪೊಲೀಸರು ನಾಪತ್ತೆಯಾದ ಆರೋಪಿಯ ಹುಡುಕಾಟದಲ್ಲಿ ತೊಡಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ