ಬ್ಯೂಟಿ ಪಾರ್ಲರ್ ಗೆ ಕರೆದ ವ್ಯಕ್ತಿ ಮಹಿಳೆಯೊಬ್ಬಳಿಗೆ ಮಾಡಿದ್ದೇನು ಗೊತ್ತಾ?

ಮಂಗಳವಾರ, 27 ನವೆಂಬರ್ 2018 (07:17 IST)
ಕೋಲ್ಕತ್ತಾ: ಬ್ಯೂಟಿ ಪಾರ್ಲರ್ ನಲ್ಲಿ ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಕೋಲ್ಕತ್ತಾದ ಟಿಲ್ಜಲಾ ಪ್ರದೇಶದಲ್ಲಿ ನಡೆದಿದೆ.


ವ್ಯಕ್ತಿಯೊಬ್ಬ ಸಂತ್ರಸ್ತ ಮಹಿಳೆಗೆ ಕರೆ ಮಾಡಿ ಬ್ಯೂಟಿ ಪಾರ್ಲರ್ ಗೆ ಬರುವಂತೆ ತಿಳಿಸಿದ್ದಾನೆ. ಆಗ ಅಲ್ಲಿಗೆ ಬಂದ ಮಹಿಳೆಯ ಮೇಲೆ ಆ ವ್ಯಕ್ತಿ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಅದನ್ನು ವಿಡಿಯೋ ಮಾಡಿ ಈ ಘಟನೆ ಬಗ್ಗೆ ಎಲ್ಲಿಯಾದರೂ ಹೇಳಿಕೊಂಡರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ನಂತರ ನಿರಂತರ ಅತ್ಯಾಚಾರ ಎಸಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ಪಶ್ಚಿಮ ಬಂಗಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ ಎನ್ನುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ