ಕಿರುಕುಳ ನೀಡುತ್ತಿದ್ದ ಯುವಕನಿಗೆ ತಕ್ಕ ಶಾಸ್ತಿ ಮಾಡಲು ಮಹಿಳೆ ಮಾಡಿದ್ದೇನು ಗೊತ್ತಾ?

ಗುರುವಾರ, 27 ಡಿಸೆಂಬರ್ 2018 (08:56 IST)
ಮುಂಬೈ : ಕಿರುಕುಳ ನೀಡುತ್ತಿದ್ದ ಯುವಕನಿಗೆ ತಕ್ಕ ಶಾಸ್ತಿ ಮಾಡಲು ಮಹಿಳೆಯೊಬ್ಬಳು ತನ್ನ ಸ್ನೇಹಿತರಿಬ್ಬರ ಜೊತೆ ಸೇರಿ  ಆತನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಮುಂಬೈ ಸಮೀಪದ ಡೊಂಬಿವಿಲಿಯಲ್ಲಿ ನಡೆದಿದೆ.


30 ವರ್ಷದ ಯುವಕನೊಬ್ಬ ಮಹಿಳೆಯೊಬ್ಬಳಿಗೆ ಯಾವಾಗಲೂ ಕಿರುಕುಳ ನೀಡುತ್ತಿದ್ದನು. ಇದರಿಂದ ಕೋಪಗೊಂಡ ಆಕೆ ಆತನಿಗೆ ತಕ್ಕ ಪಾಠ ಕಲಿಸಬೇಕು ಎಂದು  ಸ್ನೇಹಿತರಿಬ್ಬರ ಸಹಾಯ ಪಡೆದು ರೈಲ್ವೇ ಟ್ರ್ಯಾಕ್ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತನ ಮರ್ಮಾಂಗವನ್ನು ಕತ್ತರಿಸಿದ್ದಾರೆ.

 

ಇದನ್ನು ನೋಡಿ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿ, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಸಮೀಪದ ಏಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ