ಪ್ರೀತಿಸಿ ಕೈಕೊಟ್ಟ ಯುವತಿಗೆ ಪ್ರಿಯಕರ ಮಾಡಿದ್ದೇನು ಗೊತ್ತಾ?

ಬುಧವಾರ, 29 ನವೆಂಬರ್ 2023 (10:25 IST)
ಯುವತಿಯೊಬ್ಬಳ ಪ್ರೇಮಪಾಶದಲ್ಲಿ ಸಿಲುಕಿದ್ದ ಯುವಕ ಆಕೆ ತನ್ನನ್ನು ತೊರೆದು ಹೋಗುತ್ತಿದ್ದಾಳೆ ಎನ್ನುವ ಕೋಪದಲ್ಲಿ ಆಕೆಯ ಮೇಲೆ ದೌರ್ಜನ್ಯ ಎಸಗಿದ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ. 
 
 ರಷ್ಯಾದ ಯುವತಿ ಭಾರತ ತೊರೆಯುತ್ತಿರುವುದಾಗಿ ಗೆಳೆಯನಿಗೆ ಹೇಳಿದ ನಂತರ ಇಬ್ಬರಲ್ಲಿ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಆರೋಪಿ ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರೀತಿಸಿ ಕೈಕೊಟ್ಟು ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಯುವತಿ ಇದೀಗ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾಳೆ.
 
23 ವರ್ಷ ವಯಸ್ಸಿನ ರಷ್ಯಾದ ಯುವತಿಯೊಬ್ಬಳ ಮೇಲೆ ಆಕೆಯ ಗೆಳೆಯನೇ ಇಂದು ಬೆಳಿಗ್ಗೆ ಆಸಿಡ್ ದಾಳಿ ನಡೆಸಿದ ಹೇಯ ಕೃತ್ಯ ಮೆರೆದಿದ್ದಾನೆ.
 
ರಷ್ಯಾದ ಯುವತಿ ವಾಸಿಸುತ್ತಿದ್ದ ಮನೆಯ ಮಾಲೀಕನ ಪುತ್ರ  ಪ್ರಮುಖ ಆರೋಪಿಯಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಆಸಿಡ್ ದಾಳಿಗೆ ಒಳಗಾದ ಯುವತಿಯನ್ನು ಬಿಎಚ್‌ಯು ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ಘಟನೆಯ ನಂತರ ಆರೋಪಿ ಪರಾರಿಯಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಎರಡುವರೆ ಸಲ್ಫರಿಕ್ ಆಸಿಡ್ ಖರೀದಿಸಿ ತಂದಿರುವುದು ಸಾಬೀತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ವಾರಣಾಸಿಯ ಲಂಕಾ ಪೊಲೀಸ್ ಠಾಣೆ ವ್ಯಾಪ್ತಿಯ ನಂದ ನಗರ್ ಕಾಲೋನಿಯಲ್ಲಿ ರಷ್ಯಾದ ಯುವತಿ ಆರೋಪಿಯ ಮನೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ಪೇಯಿಂಗ್ ಗೆಸ್ಟ್ ಆಗಿ ವಾಸಿಸುತ್ತಿದ್ದಳು. ಇದೇ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ.

ಆರೋಪಿ ಆಕೆಯ ಮೇಲೆ ದಾಳಿ ನಡೆಸಿದ ನಂತರ ಪರಾರಿಯಾಗಿದ್ದಾನೆ. ಆಸಿಡ್ ದಾಳಿಗೆ ಒಳಗಾದ ಯುವತಿಯ ಕುಟುಂಬವನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ