ಕೇಂದ್ರ ಸರ್ಕಾರ ಚೀನಾ ಆ್ಯಪ್ ಬ್ಯಾನ್ ಮಾಡಿದ್ದಕ್ಕೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

ಬುಧವಾರ, 1 ಜುಲೈ 2020 (09:06 IST)
Normal 0 false false false EN-US X-NONE X-NONE

ನವದೆಹಲಿ :ಕೇಂದ್ರ ಸರ್ಕಾರ ಚೀನಾದ 59 ಆ್ಯಪ್ ಗಳನ್ನು ಬ್ಯಾನ್ ಮಾಡಿದ ಹಿನ್ನಲೆಯಲ್ಲಿ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಎನ್ ಡಿಎ ಸರ್ಕಾರವನ್ನು ಟೀಕಿಸಿದ್ದಾರೆ.
 

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬಿಜೆಪಿ ಮತ್ತು ಎನ್ ಡಿಎ ಸರ್ಕಾರ ಮೇಕ್ ಇನ್ ಇಂಡಿಯಾ ಉತ್ತೇಜಿಸುತ್ತೆ. ಆದರೆ ಚೀನಾ ವಸ್ತುಗಳನ್ನು ಅತಿ ಹೆಚ್ಚು ಖರೀದಿಸುತ್ತೆ. ಆ್ಯಪ್ ಬ್ಯಾನ್ ಮಾಡಿದಾಕ್ಷಣ ಸತ್ಯ ಸುಳ್ಳಾಗುವುದಿಲ್ಲ ಎಂದು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಚೀನಾದ ಆಮದು ಪ್ರಮಾಣ ಶೇ.14ಕ್ಕಿಂತ ಕಡಿಮೆ ಇತ್ತು. ಆದರೆ ಪ್ರಧಾನಿ ಮೋದಿ ಆಡಳಿತಕ್ಕೆ ಬಂದ ಮೇಲೆ ಆಮದು ಪ್ರಮಾಣ ಶೇ.18ಕ್ಕಿಂತ ಹೆಚ್ಚಿದೆ ಎಂದು ಅವರು ಟೀಕಿಸಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ