ಅವನ ಜೊತೆ ಮಲಗಬೇಡ ಎಂದ ಪತಿಗೆ, ಪತ್ನಿ ಏನ್ ಮಾಡಿದ್ದಳು ಗೊತ್ತಾ?

ಶನಿವಾರ, 4 ನವೆಂಬರ್ 2023 (13:43 IST)
ಮಹಿಳೆಯೊಬ್ಬಳು ಮನೆ ಕೆಲಸ ಮಾಡುತ್ತಿದ್ದ ಮನೆಯ ಯಜಮಾನನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ಬಗ್ಗೆ ತಿಳಿದ ಪತಿ  ಮಹಿಳೆಯನ್ನು ಪ್ರಶ್ನಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಜಗಳ ನಡೆದು ವಿಕೋಪಕ್ಕೆ ಹೋಗಿ ಹೀನಾಯ ಅಂತ್ಯ ಕಂಡಿದೆ.

ರಾತ್ರಿ ಪತಿ ಮಲಗಿದ್ದಾಗ ಅವನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾಳೆ. ಈ ಘಟನೆಯಲ್ಲಿ ವ್ಯಕ್ತಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
 
ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತಿಗೆ ಪತ್ನಿ ಬೆಂಕಿ ಹಚ್ಚಿದ ಘಟನೆ ಗುಜರಾತ್  ನಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಆರೋಪಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ